Sunday, June 29, 2025
Homeಕರಾವಳಿಕಾಸರಗೋಡಿನಲ್ಲಿ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ

ಕಾಸರಗೋಡಿನಲ್ಲಿ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ

spot_img
- Advertisement -
- Advertisement -

ಕಾಸರಗೋಡು :ಡಿಸೆಂಬರ್ 4 ರಂದು ಬದಿಯಡ್ಕ ಬಲಿ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮಗುವಿನ ತಾಯಿಯನ್ನು ಬಂಧಿಸಿದ್ದಾರೆ. ಅಲ್ಲದೇ ಮಗುವಿನ ತಾಯಿಯೇ ಈ ಕೊಲೆ ಮಾಡಿರೋದು ಅನ್ನೋದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಪೆರ್ಲತ್ತಡ್ಕದ ಶಾರದಾ (25) ಬಂಧಿತ ಆರೋಪಿ. ಡಿ.4ರಂದು ಈಕೆಯ ಪುತ್ರ ಸ್ವಸ್ತಿಕ್ ನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಸುತ್ತಮುತ್ತಲ ನಿವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಸಾಬೀತಾಗಿತ್ತು. ಘಟನೆ ಬಳಿಕ ಶಾರದಾ, ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದಳು. ಶಾರದಾ ಳನ್ನು ಬದಿಯಡ್ಕ ಠಾಣೆ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ಸಂದರ್ಭ ಮಗುವನ್ನು ಕೊಲೆಗೈದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ವಿಚಾರಣೆ ವೇಳೆ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ವ್ಯಕ್ತಪಡಿಸಿದ್ದರೂ ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂದು ಬೆಳಕಿಗೆ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥತೆಯಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಯನ್ನು ಕಾಸರಗೋಡು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು , 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -
spot_img

Latest News

error: Content is protected !!