Thursday, June 4, 2026
Homeಕರಾವಳಿಮಂಗಳೂರಿನ ಬೈಕಂಪಾಡಿಯ ಕೈಗಾರಿಕಾ ಘಟಕದಲ್ಲಿ ಭಾರೀ ಬೆಂಕಿ ಅನಾಹುತ

ಮಂಗಳೂರಿನ ಬೈಕಂಪಾಡಿಯ ಕೈಗಾರಿಕಾ ಘಟಕದಲ್ಲಿ ಭಾರೀ ಬೆಂಕಿ ಅನಾಹುತ

- Advertisement -
- Advertisement -

ಮಂಗಳೂರು: ನಗರದ ಹೊರವಲಯದಲ್ಲಿರುವ ಬೈಕಂಪಾಡಿ ಕೈಗಾರಿಕಾ ವಲಯದ ಲೆಮಿನಾ ಬಿಡಿ ಉಪಕರಣಗಳ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಅನಾಹುತ ಸಂಭವಿಸಿದ್ದು, ಕೋಟ್ಯಂತರ ಹಾನಿಯಾಗಿದೆ.

ಘಟಕದಲ್ಲಿ ನಿನ್ನೆ ಸಂಜೆ ವಿದ್ಯುತ್ ಕಡಿತಗೊಂಡ ವೇಳೆ ಘಟನೆ ನಡೆದಿದೆ. ಆಯಿಲ್ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಮೂರು ವಾಹನಗಳು, ಎಂಸಿಎಫ್ ಹಾಗೂ ಎಂಆರ್‌ಪಿಎಲ್‌ನ ತಲಾ ಒಂದೊಂದು ವಾಹನಗಳು ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸಂಸ್ಥೆಗೆ ಭಾರೀ ನಷ್ಟವಾಗಿದೆ. ಹಾನಿಯಾದ ಪ್ರಮಾಣವನ್ನು ಲೆಕ್ಕ ಹಾಕಲಾಗುತ್ತಿದೆ. ಎರಡು ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ತಹಬದಿಗೆ ಬಂದಿತು ಎಂದು ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!