- Advertisement -
![]()
- Advertisement -
ಹೊಸದಿಲ್ಲಿ:ಭಾರತದ ಕೊರೋನ ವೈರಸ್ ಲಸಿಕೆ ಅಭಿಯಾನ ಜನವರಿ 16ರಿಂದ ಆರಂಭವಾ ಗಲಿದ್ದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆ ಬಳಿಕ ಕೇಂದ್ರ ಸರಕಾರ ಈ ಘೋಷಣೆ ಮಾಡಿದೆ.
ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ನೇರವಾಗಿ ಭಾಗಿಯಾಗುವ 1 ಕೋಟಿ ಆರೋಗ್ಯ ಕಾರ್ಯಕರ್ತರು, ವೈದ್ಯರು, ಸಮುದಾಯ ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸರಂತಹ 2 ಕೋಟಿ ಮುಂಚೂಣಿ ಸಿಬ್ಬಂದಿಗಳಿಗೆ ಕೊರೋನ ಲಸಿಕೆ ನೀಡುವಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದು ಇದೇವೇಳೆ ತಿಳಿಸಲಾಗಿದೆ.
- Advertisement -


