Thursday, June 4, 2026
Homeಕರಾವಳಿನಾಳೆ 7-8 ನೂತನ ಸಚಿವರ ಪದಗ್ರಹಣ: ಕರಾವಳಿಯ ಒಬ್ಬ ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ

ನಾಳೆ 7-8 ನೂತನ ಸಚಿವರ ಪದಗ್ರಹಣ: ಕರಾವಳಿಯ ಒಬ್ಬ ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಸಚಿವಾಕಾಂಕ್ಷಿಗಳಿಗೆ ಕಡೆಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡ್ ನ್ಯೂಸ್ ನೀಡಿದ್ದಾರೆ.ಸಂಕ್ರಾಂತಿಗೂ ಮುನ್ನ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಸಂಜೆ ರಾಜಭವನದಲ್ಲಿ ಸರಳವಾಗಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ನಾಳೆ 3:30ಕ್ಕೆ ನೂತನ ಸಚಿವರಿಗೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ನಾಳೆ 3:50ಕ್ಕೆ 7-8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಸಂಭಾವ್ಯ ಸಚಿವರ ಪಟ್ಟಿ:
ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ, ಮುನಿರತ್ನ, ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಸಿ.ಪಿ.ಯೊಗೇಶ್ವರ್, ಮುರುಗೇಶ್ ನಿರಾಣಿ, ಎಸ್.ಅಂಗಾರ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ. ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಲ್ಳುವ ಸಾಧ್ಯತೆಯಿದ್ದು, ಅಬಕಾರಿ ಸಚಿವ ಹೆಚ್.ನಾಗೇಶ್ ಅವರ ರಾಜೀನಾಮೆ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

- Advertisement -

Latest News

error: Content is protected !!