Sunday, June 7, 2026
Homeಕರಾವಳಿಬಂಟ್ವಾಳದಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ: 8 ಮಂದಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳದಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ: 8 ಮಂದಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡ್ ನ ಭಾರತ್ ಕಾಂಪ್ಲೆಕ್ಸ್ ಕೆಳಭಾಗದ ಕೊಠಡಿಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ದಾಳಿ ನಡೆಸಿದ ಬಂಟ್ವಾಳ ಪೊಲೀಸರು ನಿನ್ನೆ ಐವರು ಮಹಿಳೆಯರು ಹಾಗೂ ಮೂವರು ಪುರುಷರನ್ನು ಬಂಧಿಸಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಬಂಟ್ವಾಳ ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ತಂಡದೊಂದಿಗೆ ದಾಳಿ ನಡೆಸಿದ ವೇಳೆ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ 5 ಜನ ಮಹಿಳೆಯರು ಹಾಗೂ ಮೂವರು ಪುರುಷರನ್ನು ಬಂಧಿಸಿದ್ದಾರೆ.

ಪುತ್ತೂರು ನೆಕ್ಕಿಲಾಡಿ ನಿವಾಸಿ ಶರಣ್‌ (28), ಬಂಟ್ವಾಳ ಕರಿಯಂಗಳ ನಿವಾಸಿ ಭರತ್(28), ಪುತ್ತೂರು ಚಿಕ್ಕಮೂಡ್ನೂರು ಗ್ರಾಮ ನಿವಾಸಿ ಕಿರಣ್ ಕೆ. (25)ಎಂಬವರನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಒಟ್ಟು ರೂ. 4,400/  ನಗದು ಹಾಗೂ ಇತರ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!