Saturday, June 6, 2026
Homeತಾಜಾ ಸುದ್ದಿಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸೇನಾ ಅಧಿಕಾರಿ

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸೇನಾ ಅಧಿಕಾರಿ

- Advertisement -
- Advertisement -

ಶ್ರೀನಗರ:ಇಲ್ಲಿನ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯತಂಗ್ದಾರ್‌ ವಲಯದ ಮುಂಚೂಣಿ ನೆಲೆಯಲ್ಲಿ ನಿಯೋಜನೆಗೊಂಡಿದ್ದ ಸೇನಾ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಅಧಿಕಾರಿಯನ್ನು ಜಮ್ಮು ಮತ್ತು ಕಾಶ್ಮೀರದ ಆರನೇ ರೈಫಲ್ಸ್‌ನ ಕಂಪನಿ ಕಮಾಂಡರ್‌ ಮೇಜರ್‌ ಫಯಾಜುಲ್ಲಾ ಖಾನ್ ಎಂದು ಗುರುತಿಸಲಾಗಿದೆ.‌ ಖಾನ್‌ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!