Friday, June 5, 2026
Homeಕರಾವಳಿಉಳ್ಳಾಲದಂತೆ ಕೊಣಾಜೆಯಲ್ಲೂ ವಿಕೃತಿ ಮೆರೆದ ಕಿಡಿಗೇಡಿಗಳು: ಭಗವಧ್ವಜದ ಮೇಲೆ ಮಲ ಮೂತ್ರ ವಿಸರ್ಜನೆ

ಉಳ್ಳಾಲದಂತೆ ಕೊಣಾಜೆಯಲ್ಲೂ ವಿಕೃತಿ ಮೆರೆದ ಕಿಡಿಗೇಡಿಗಳು: ಭಗವಧ್ವಜದ ಮೇಲೆ ಮಲ ಮೂತ್ರ ವಿಸರ್ಜನೆ

- Advertisement -
- Advertisement -

ಮಂಗಳೂರು: ಉಳ್ಳಾಲದ ಕೊರಗಜ್ಜನ ಸನ್ನಿಧಾನದಲ್ಲಿ ವಿಕೃತಿ ಮೆರೆದ ಬೆನ್ನಲ್ಲೇ ಕೊಣಾಜೆಯಲ್ಲೂ ಇದೇ ತರಹದ ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವ ಘಟನೆ ನಡೆದಿದೆ.

ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ-ಮೂತ್ರ ವಿಸರ್ಜನೆಗೈದು ವಿಕೃತಿ ಮೆರೆದಿದ್ದಾರೆ. ಅಲ್ಲದೇ ಭಗವಧ್ವಜದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆಯ ಕುರಿತು ಕೊಣಾಜೆ ಠಾಣೆಗೆ ದೂರು ನೀಡಲಾಗಿದ್ದು, ಸಿಸಿ ಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!