Saturday, June 6, 2026
Homeಕರಾವಳಿಮಂಗಳೂರು: ಅಪರಿಚಿತ ವಾಹನ ಡಿಕ್ಕಿ- ಸ್ಥಳದಲ್ಲೇ ಸಾವನ್ನಪ್ಪಿದ ಪಾದಚಾರಿ

ಮಂಗಳೂರು: ಅಪರಿಚಿತ ವಾಹನ ಡಿಕ್ಕಿ- ಸ್ಥಳದಲ್ಲೇ ಸಾವನ್ನಪ್ಪಿದ ಪಾದಚಾರಿ

- Advertisement -
- Advertisement -

ಉಳ್ಳಾಲ:ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ವೊಂದು ಢಿಕ್ಕಿ ಹೊಡೆದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ದುರ್ದೈವಿಯನ್ನು ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದ ನಂತರ ಢಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದೆ.ಮಂಗಳೂರು ದಕ್ಷಿಣ ಸಂಚಾರಿ ಪೋಲಿಸಾರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!