- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ವಿಧಾನ ಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಉಪಸಭಾಪತಿ ಚುನಾವಣೆಗೆ ಬಿಜೆಪಿಯಿಂದ ಎಂ.ಕೆ.ಪ್ರಾಣೇಶ್ ಮತ್ತು ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧಿಸಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಪರ 41 ಮತಗಳನ್ನು ಚಲಾವಣೆಯಾಗಿದ್ದರೆ. ವಿರುದ್ಧವಾಗಿ 24 ಮತಗಳು ಚಲಾವಣೆಯಾಗಿವೆ. ಹೀಗಾಗಿ ಎಂ.ಕೆ. ಪ್ರಾಣೇಶ್ ಅವರ ಅಧಿಕೃತ ಆಯ್ಕೆಯನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಘೋಷಿಸಿದರು.
ವಿಧಾನಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾದ ಎಂ.ಕೆ. ಪ್ರಾಣೇಶ್ ಗೆ ಆಡಳಿತ ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
- Advertisement -