Saturday, June 13, 2026
Homeತಾಜಾ ಸುದ್ದಿಕೆಜಿಎಫ್-2 ಸಿನಿಮಾದ ರಿಲೀಸ್ ಡೇಟ್ ಫಿಕ್ಸ್..

ಕೆಜಿಎಫ್-2 ಸಿನಿಮಾದ ರಿಲೀಸ್ ಡೇಟ್ ಫಿಕ್ಸ್..

- Advertisement -
- Advertisement -

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಕೆಜಿಎಫ್ ಚಾಪ್ಟರ್ 2’ ಜುಲೈ 16 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಇಡೀ ದೇಶದ ಗಮನ ಸೆಳೆದ, ಆರಂಭದಿಂದಲೂ ಭಾರಿ ಕುತೂಹಲ ಮೂಡಿಸಿರುವ ‘ಕೆಜಿಎಫ್ ಚಾಪ್ಟರ್ 2’ ಜುಲೈ 16 ರಂದು ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಮಾಹಿತಿ ನೀಡಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ ಕಿರಗಂದೂರು ನಿರ್ಮಾಣ ಮಾಡಿರುವ ಚಿತ್ರದಲ್ಲಿ ಯಶ್, ಸಂಜಯ್ ದತ್, ಪ್ರಕಾಶ್ ರಾಜ್, ರವೀನಾ ಟಂಡನ್ ಸೇರಿದಂತೆ ಬಹುದೊಡ್ಡ ತಾರಾಬಳಗವೇ ಇದೆ.

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ನಿರ್ಮಾಣವಾಗಿರುವ ಚಿತ್ರದ ಟೀಸರ್ ಬಿಡುಗಡೆಯಾಗಿ ದಾಖಲೆ ಬರೆದಿದೆ. ಈಗ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದ್ದು ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ.

- Advertisement -

Latest News

error: Content is protected !!