Friday, August 28, 2026
Homeತಾಜಾ ಸುದ್ದಿಬೆಂಗಳೂರು: ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಲವ್, ಸೆಕ್ಸ್, ದೋಖಾ, ಮಹಿಳಾ ಪ್ರಾದ್ಯಾಪಕಿಯ ಪುತ್ರನ ಬಂಧನ

ಬೆಂಗಳೂರು: ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಲವ್, ಸೆಕ್ಸ್, ದೋಖಾ, ಮಹಿಳಾ ಪ್ರಾದ್ಯಾಪಕಿಯ ಪುತ್ರನ ಬಂಧನ

- Advertisement -
- Advertisement -

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಮಹಿಳಾ ಲೆಕ್ಚರರ್ ರ​ ಮಗನೊಬ್ಬ ವಿದ್ಯಾರ್ಥಿನಿಯನ್ನು ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ವಿದ್ಯಾರ್ಥಿನಿ ವಿದ್ಯಾರಣ್ಯಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಚಂದನ್ ಎಂಬುವನನ್ನು ಬಂಧಿಸಿದ್ದಾರೆ.

ಚಂದನ್ ಅವರ ತಾಯಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದು, ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಚಂದನ್ ಗೆ 2018ರಲ್ಲಿ ಪರಿಚಯವಾಗಿದ್ದಳು. ಇವರಿಬ್ಬರ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಚಂದನ್, ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಬಂಧ ಬೆಳೆಸಿದ್ದಾನೆ. ಎರಡು ಸಲ ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿದ್ದಾನೆ ಎಂಬುದುನ್ನು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.

ಅಲ್ಲದೆ ಮದುವೆಗಾಗಿ ಆರೋಪಿ ಚಂದನ್ ಯುವತಿಯ ಬಳಿಯಿಂದ ಸುಮಾರು 5-6ರಿಂದ ಲಕ್ಷ ಹಣವನ್ನೂ ಪಡೆದಿದ್ದ. ಇದೀಗ ಮದುವೆ ಆಗಲ್ಲ ಎಂದು ವಂಚಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಚಂದನ್ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!