Sunday, June 7, 2026
Homeಕರಾವಳಿಮಂಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದು ಮದುವೆಯ ಸಿದ್ಧತೆಯಲ್ಲಿದ್ದ ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ

ಮಂಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದು ಮದುವೆಯ ಸಿದ್ಧತೆಯಲ್ಲಿದ್ದ ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಗರ ಹೊರವಲಯದ ಕುಳಾಯಿ ಸಮೀಪ ಗೋಕುಲನಗರ ಕ್ರಾಸ್ ನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಕೃಷ್ಣಾಪುರ ಚೊಕ್ಕಬೆಟ್ಟುವಿನ, ಸದ್ಯ ನಗರದ ಬೋಂದೆಲ್‌ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ‌. ಇಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ವಿವಾಹ ಕಾರ್ಯಕ್ರಮಕ್ಕೆ ತೆರಳಲು ಮಂಗಳೂರಿನಲ್ಲಿ ಶಾಪಿಂಗ್ ಮುಗಿಸಿ ನಂತರ ಕೃಷ್ಣಾಪುರದ ಚೊಕ್ಕಬೆಟ್ಟು ಕಡೆ ಹೋಗುತ್ತಿದ್ದಾಗ ಬುಧವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿ‌ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಎಂಬವರಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರು ಡ್ರೈವ್ ಮಾಡುತ್ತಿದ್ದ ರಾಹಿಲ್ ಶಮೀಮ್ ಗೆ ವಿರುದ್ಧ ದಿಕ್ಕಿನಲ್ಲಿ ವಾಹನ ಬರುತ್ತಿದೆ ಎಂದು ಅಂದುಕೊಂಡು ಅದನ್ನು ತಪ್ಪಿಸಲು ಹೋಗಿ ರಸ್ತೆಯ ಬದಿಯಲ್ಲಿದ್ದ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ. ಸುಹಾನಾ ಅವರಿಗೆ ಪತಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!