Monday, June 8, 2026
Homeತಾಜಾ ಸುದ್ದಿಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ರೇಪ್​​ ಮಾಡಿ ಮೋಸ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಎಫ್​ಐಆರ್​

ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ರೇಪ್​​ ಮಾಡಿ ಮೋಸ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಎಫ್​ಐಆರ್​

- Advertisement -
- Advertisement -

ಉದಯಪುರ: ಯುವತಿಯೋರ್ವಳ ಜೊತೆ ಸ್ನೇಹ ಸಂಪಾದಿಸಿ ನಂತರ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಕೊನೆಗೆ ನಂಬಿಕೆ ದ್ರೋಹ ಮಾಡಿರುವ ಬಿಜೆಪಿ ಶಾಸಕನ ವಿರುದ್ಧ ರೇಪ್ ಕೇಸ್ ದಾಖಲಾಗಿದೆ.

ಹೌದು, ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್‌ ಲಾಲ್‌ ಭೀಲ್ ವಿರುದ್ಧ ಈ ದೂರು ದಾಖಲಾಗಿದೆ. ಸುಖರ್​ ಪೊಲೀಸ್​ ಠಾಣೆಯಲ್ಲಿ 35 ವರ್ಷದ ಯುವತಿ ದಾಖಲು ಮಾಡಿರುವ ದೂರಿನ ಅನ್ವಯ ಶಾಸಕನ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್, ದೂರು ನೀಡಿರುವ ಯುವತಿಯ ವೈದ್ಯಕೀಯ ಪರೀಕ್ಷೆ ನಡೆಸಿ, ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ’ ಎಂದು ಹೇಳಿದ್ದಾರೆ.

‘ದೂರು ನೀಡಿರುವ ಸಂತ್ರಸ್ತೆ ಹಾಗೂ ಶಾಸಕರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ವರ್ಷಗಳಿಂದ ಇವರಿಬ್ಬರೂ ಸಂಪರ್ಕದಲ್ಲಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ದರಿಂದ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!