Thursday, June 4, 2026
Homeಕರಾವಳಿಗುಂಡ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸವಾರರ ಪರದಾಟ

ಗುಂಡ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸವಾರರ ಪರದಾಟ

- Advertisement -
- Advertisement -

ಗುಂಡ್ಯ : ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದ ಕಾರಣ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ.


ನಿನ್ನೆ ರಾತ್ರಿ ಮರ ಬಿದ್ದಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಇದಾಗಿದೆ. ಗುಂಡ್ಯ ಅರಣ್ಯ ಕಚೇರಿಯ ಬಳಿ ಬೃಹತ್ ಮರ ಮುರಿದು ಬಿದ್ದ ಕಾರಣ ಸಂಚಾರಕ್ಕೆ ತೊಡಕಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ವಿದ್ಯುತ್ ಲೈನ್ ಗೂ ಹಾನಿಯಾಗಿದ್ದು, ಅರಣ್ಯಾಧಿಕಾರಿಗಳು ಮರವನ್ನು ತೆರವುಗೊಳಿಸುತ್ತಿದ್ದಾರೆ.

- Advertisement -

Latest News

error: Content is protected !!