Thursday, June 4, 2026
Homeತಾಜಾ ಸುದ್ದಿಪ್ರೇಮಿಗಳ ದಿನದಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ - ಅಮರ್ಥ್ಯ

ಪ್ರೇಮಿಗಳ ದಿನದಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ – ಅಮರ್ಥ್ಯ

- Advertisement -
- Advertisement -

ಬೆಂಗಳೂರು : ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಮತ್ತು ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಹಾಗೂ ಎಸ್​.ಎಂ. ಕೃಷ್ಣನವರ ಮೊಮ್ಮಗ ಅಮರ್ಥ್ಯ ಪ್ರೇಮಿಗಳ ದಿನವಾದ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನೆರವೇರಿತು. ಇನ್ನು ಫೆಬ್ರವರಿ 17ರಂದು ಆರತಕ್ಷತೆ ಕಾರ್ಯಕ್ರಮ ನೆರವೇರಲಿದೆ.
ಇಂದು ತಮ್ಮ ಮಗಳಿಗೆ ಅಮರ್ಥ್ಯ ತಾಳಿ ಕಟ್ಟುತ್ತಿದ್ದಂತೆ ಡಿಕೆ ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಸಂಗೀತ್ ಕಾರ್ಯಕ್ರಮದಲ್ಲಿ ಕೂಡ ಅಪ್ಪಾ ಐ ಲವ್ ಯೂ ಎಂದು ನೃತ್ಯ ಮಾಡಿದ ಐಶ್ವರ್ಯಳನ್ನು ಕಂಡು ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದರು. ಇಂದು ಮದುವೆಯಲ್ಲಿ ಕೂಡ ಕಣ್ಣೀರು ಸುರಿಸುತ್ತಲೇ ಅವರು ವಧು-ವರರಿಗೆ ಅಕ್ಷತೆ ಹಾಕಿ, ಹಾರೈಸಿದ್ದಾರೆ. ಈ ವೇಳೆ ಭಾವುಕರಾದ ಐಶ್ವರ್ಯ ಕೂಡ ಕಣ್ತುಂಬಿಕೊಂಡಿದ್ದಾರೆ. ಕೆಂಪು ಬಣ್ಣದ ರೇಷ್ಮೆ ಸೀರೆಯುಟ್ಟು, ವಜ್ರಾಭರಣಗಳನ್ನು ತೊಟ್ಟಿದ್ದ ಐಶ್ವರ್ಯ ಮದುಮಗಳಾಗಿ ಮಿಂಚುತ್ತಿದ್ದರು.
ಕಳೆದೊಂದು ವಾರದಿಂದ ಡಿಕೆ ಶಿವಕುಮಾರ್ ಮನೆಯಲ್ಲಿ ಐಶ್ವರ್ಯಾಳ ಮದುವೆ ಸಂಭ್ರಮ ಜೋರಾಗಿದ್ದು, ಮೆಹಂದಿ, ಅರಿಶಿಣ ಶಾಸ್ತ್ರ, ಸಂಗೀತ್ ಕಾರ್ಯಕ್ರಮಗಳು ನಡೆದಿವೆ. ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಇಂದು ಅದ್ದೂರಿಯ ಮದುವೆ ನಡೆದಿದೆ. ಎಸ್​ಎಂ ಕೃಷ್ಣ ಹಾಗೂ ಡಿಕೆ ಶಿವಕುಮಾರ್ ಕುಟುಂಬಸ್ಥರು ಮದುವೆಯಲ್ಲಿ ಪಾಲ್ಗೊಂಡಿದ್ದು, ಆಪ್ತ ಸಂಬಂಧಿಕರಿಗಷ್ಟೇ ಆಮಂತ್ರಣ ನೀಡಲಾಗಿದೆ. ರಿಸೆಪ್ಷನ್​ನಲ್ಲಿ ಪ್ರಭಾವಿ ರಾಜಕೀಯ ನಾಯಕರು, ಉದ್ಯಮಿಗಳು ಕೂಡ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!