Saturday, June 6, 2026
Homeಕರಾವಳಿಕಡಬ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಪಾರು

ಕಡಬ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಪಾರು

- Advertisement -
- Advertisement -

ಕಡಬ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದಿದ್ದು, ಕಾರು ಸಂಪೂರ್ಣ ಜಖಂಗೊಂಡ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಮರ್ಧಾಳ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದುದೇ ಘಟನೆಗೆ ಕಾರಣವೆನ್ನಲಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!