Wednesday, June 3, 2026
Homeತಾಜಾ ಸುದ್ದಿಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್: ಟಿವಿ, ಬೈಕ್, ಫ್ರಿಡ್ಜ್ ಹೊಂದಿರುವವರ ಬಿಪಿಎಲ್...

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್: ಟಿವಿ, ಬೈಕ್, ಫ್ರಿಡ್ಜ್ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು

- Advertisement -
- Advertisement -

ಬೆಳಗಾವಿ: 5 ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್‌, ಟೀವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು ಅಂತ ಬೆಳಗಾವಿಯಲ್ಲಿ ಆಹಾರ & ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ತಿಳಿಸಿದ್ದಾರೆ.

ಇದೇ ವೇಳೆ ಅವರು ಮಾತನಾಡಿ, 5 ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್‌, ಟೀವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು. ಈಗಾಗಲೇ ಇಂತಹವರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌ ಅಂತ್ಯದವರೆಗೆ ಸಮಯ ನೀಡಲಾಗಿದೆ ಅಂತ ಅವರು ಹೇಳಿದ್ದಾರೆ.

ಇನ್ನೂ ಮಾರ್ಚ್ ಅಂತ್ಯದವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಿದ್ದೇವೆ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು ಸೇರಿದಂತೆ, ಕೆಲವು ಅಧಿಕಾರಿಗಳ ಬಳಿಯಲ್ಲಿ ಕೂಡ ಬಿಪಿಎಲ್‌ ಕಾರ್ಡ್‌ ಇರೋದು ತಿಳಿದು ಬಂದಿದೆ, ಇದನ್ನು ಕೂಡ ವಾಪಸ್ಸು ನೀಡುವಂತೆ ಸೂಚನೆ ನೀಡಲಾಗಿದೆ ಅಂತ ಅವರು ಹೇಳಿದರು.

- Advertisement -

Latest News

error: Content is protected !!