Sunday, June 7, 2026
Homeತಾಜಾ ಸುದ್ದಿಜೆಡಿಎಸ್​ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ

ಜೆಡಿಎಸ್​ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ

- Advertisement -
- Advertisement -

ಬೆಂಗಳೂರು: ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ.

ಫೆ.9ರಂದು ನಿರೀಕ್ಷೆಯಂತೆ ಜಾತ್ಯತೀತ ಜನತಾದಳದ ನಾಯಕ ಬಸವರಾಜ ಹೊರಟ್ಟಿ ಅವರು ಸಭಾಪತಿಯಾಗಿ ಆಯ್ಕೆಯಾಗಿದ್ದರು. ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಭಾಪತಿಗಳು ಪಕ್ಷಾತೀತವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಪತ್ರವನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡಗೆ ಹೊರಟ್ಟಿ ಕಳುಹಿಸಿದ್ದಾರೆ.

ಪರಿಷತ್ ಸಭಾಪತಿ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್​ ಭಾಗಿಯಾಗಿರಲಿಲ್ಲ. ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದೊಂದಿಗೆ ಅವಿರೋಧವಾಗಿ ಸಭಾಪತಿಯಾಗಿ ಆಯ್ಕೆಯಾಗಿದ್ದರು.

- Advertisement -

Latest News

error: Content is protected !!