Friday, June 5, 2026
Homeಕರಾವಳಿಕಡಬ: ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಹಂಪ್ ಗೆ ಅಮಾಯಕ ಮಹಿಳೆ ಬಲಿ

ಕಡಬ: ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಹಂಪ್ ಗೆ ಅಮಾಯಕ ಮಹಿಳೆ ಬಲಿ

- Advertisement -
- Advertisement -

ಕಡಬ: ಇಲ್ಲಿನ ಕಡಬ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯ ಬಳಿ ಇಲಾಖೆಯಿಂದ ಅವೈಜ್ಞಾನಿಕವಾಗಿ ಅಳವಡಿಸಲಾಗಿದೆ ಎನ್ನಲಾದ ಹಂಪ್ ಗೆ ಅಮಾಯಕ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ವೇಣೂರಿನ ಬಜಾಲು ಸಮೀಪದ ವಿರಂದಲೆ ನಿವಾಸಿ ವೆಂಕಪ್ಪ ಸಾಲ್ಯಾನ್ ಎಂಬವರ ಪತ್ನಿ ಸುಂದರಿ (65) ಮೃತ ಮಹಿಳೆ.

ಮೃತ‌ ಮಹಿಳೆಯು ತನ್ನ ಮೊಮ್ಮಗನೊಂದಿಗೆ ಇಂದು ಬೆಳಗ್ಗೆ ವೇಣೂರಿನಿಂದ ಕಡಬಕ್ಕೆಂದು ಹೊರಟಿದ್ದು, ಮಂಜು ಆವರಿಸಿದ್ದರಿಂದ ಹಂಪ್ ಗೋಚರಿಸದೆ ದ್ವಿಚಕ್ರ ವಾಹನ ಪಲ್ಟಿಯಾಗಿದ್ದು, ರಸ್ತೆಗೆಸೆಯಲ್ಪಟ್ಟ ಸುಂದರಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!