Thursday, June 4, 2026
Homeತಾಜಾ ಸುದ್ದಿಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಮೇಶ್ ಜಾರಕಿಹೊಳಿ

ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಮೇಶ್ ಜಾರಕಿಹೊಳಿ

- Advertisement -
- Advertisement -

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆಯ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಬೆಳಗಾವಿ ಸಾಹುಕಾರನ ರಾಜೀನಾಮೆಗೆ ಎಲ್ಲೆಡೆಯಿಂದ ಭಾರೀ ಒತ್ತಡ ಕೇಳಿ ಬಂದಿತ್ತು. ಸಿಡಿ ಬಹಿರಂಗವಾದ 20 ಗಂಟೆಯಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

ಇನ್ನು ಸಿಡಿ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಬಿಜೆಪಿ ಹೈಕಮಾಂಡ್,  ಮುಂದಿನ ದಿನಗಳಲ್ಲಿ ನಾಲ್ಕು ವಿಧಾನಸಭೆ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ವಿಧಾನಸಭಾ ಚುನಾವಣೆ ನಡೆಯುತ್ತಿರುವುದರಿಂದ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿತ್ತು. ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚನೆ ರವಾನೆಯಾದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಲಾಗಿದೆ.

ಅಲ್ಲದೇ ಪಕ್ಷಕ್ಕೆ ಮುಜುಗರವಾಗಬಾರದು ಅನ್ನೋ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಆರೋಪ ಮುಕ್ತವಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡಿ ಅಂತಾ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

- Advertisement -

Latest News

error: Content is protected !!