Saturday, June 6, 2026
Homeತಾಜಾ ಸುದ್ದಿರಾಜಕೀಯ ನಿವೃತ್ತಿ ಪಡೆಯುತ್ತಾರಂತೆ ಬಿಜೆಪಿಯ ಫೈರ್ ಬ್ರ್ಯಾಂಡ್ : ಅನಂತ್ ಕುಮಾರ್ ಹೆಗಡೆ ಅವರಿಗೆ ಅಂತಹದ್ದೇನಾಯ್ತು?

ರಾಜಕೀಯ ನಿವೃತ್ತಿ ಪಡೆಯುತ್ತಾರಂತೆ ಬಿಜೆಪಿಯ ಫೈರ್ ಬ್ರ್ಯಾಂಡ್ : ಅನಂತ್ ಕುಮಾರ್ ಹೆಗಡೆ ಅವರಿಗೆ ಅಂತಹದ್ದೇನಾಯ್ತು?

- Advertisement -
- Advertisement -

ಕಾರವಾರ: ಅನಂತ್ ಕುಮಾರ್ ಹೆಗಡೆ ಅಂದಾಕ್ಷಣ ಎಲ್ಲರಿಗೂ ನೆನಪಾಗೋದು ಅವರ ಪ್ರಖರ ಮಾತುಗಳು. ಇದೇ ಅನಂತ್ ಕುಮಾರ್ ಅವರು ಕಠಿಣ ನಿರ್ಧಾರವೊಂದನ್ನು ತೆಗೆದುಕೊಳ್ಳೋದಕ್ಕೆ ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ.

ಹೌದು.. ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಸದಸ್ಯ ಅನಂತ್ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆನ್ನುನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಅನಂತ್ ಕುಮಾರ್ ಹೆಗಡೆ ಕಳೆದ ಚುನಾವಣೆ ವೇಳೆಯಲ್ಲಿಯೇ ಇಂತಹ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿದೆ. ಸದ್ಯ ಅವರು ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಾರ್ವಜನಿಕರ ಭೇಟಿಗೆ ಅನಂತ್ ಕುಮಾರ್ ಹೆಗಡೆ ಲಭ್ಯವಿರುವುದಿಲ್ಲ ಎಂದು ಹೇಳಲಾಗುತ್ತಿದೆ.

ಬೆನ್ನುನೋವು ಮತ್ತು ಕಾಲು ನೋವು ಉಲ್ಬಣವಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ವಿಶ್ರಾಂತಿಯಲ್ಲಿರುವ ಅವರು ರಾಜಕೀಯ ನಿವೃತ್ತಿ ಹೊಂದುವ ಚಿಂತನೆಯಲ್ಲಿದ್ದಾರೆ ಎಂದು ಹೇಳಲಾಗಿದೆ

- Advertisement -

Latest News

error: Content is protected !!