Saturday, June 13, 2026
Homeಕರಾವಳಿಬೆಳ್ತಂಗಡಿ: ತನ್ನ ತಂದೆ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿಗೆ ಸಿಲುಕಿ ಬಾಲಕ ದಾರುಣ ಸಾವು

ಬೆಳ್ತಂಗಡಿ: ತನ್ನ ತಂದೆ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿಗೆ ಸಿಲುಕಿ ಬಾಲಕ ದಾರುಣ ಸಾವು

- Advertisement -
- Advertisement -

ಬೆಳ್ತಂಗಡಿ: ಉಜಿರೆ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ 3ನೇ ತರಗತಿ ವಿದ್ಯಾರ್ಥಿ ಮುರ್ಷಿದ್ (9ವ.) ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ.

ಉಜಿರೆ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ‌ ಮೊದಲನೆಯವನಾಗಿದ್ದ ಬಾಲಕ ಮುರ್ಷಿದ್ ತನ್ನ ತಂದೆಯ ಜೊತೆಗೆ ಮೂಡಬಿದ್ರೆಯ ಕಲ್ಲಿನ‌ಕೋರೆಗೆ ಹೋಗುವಾಗ ಬಾಲಕನೂ ಜೊತೆಗೆ ತೆರಳಿದ್ದನೆಂದು ಹೇಳಲಾಗಿದೆ.
ತಂದೆಯೇ ಚಾಲಕನಾಗಿ ಲಾರಿ ಚಲಾಯಿಸಿದ ವೇಳೆ ಬಾಲಕ ಆಕಸ್ಮಿಕವಾಗಿ ಅದರ ಚಕ್ರದಡಿ ಸಿಲುಕಿ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಉಜಿರೆಯ ರೈಫಾ ಗಾರ್ಡನ್ ಫ್ಲಾಟ್‌ನಲ್ಲಿ ನೆಲೆಸಿದ್ದ ದಂಪತಿಗೆ ನಾಲ್ಕು ವರ್ಷ ಪ್ರಾಯದ ಸಫಾ ಎಂಬ ಪುತ್ರಿ ಇದ್ದಾರೆ.

ಘಟನೆ ನಡೆದ ತಕ್ಷಣ ಮೂಡಬಿದ್ರೆ ಆಸ್ಪತ್ರೆಗೆ ಬಾಲಕನ್ನು ಸಾಗಿಸಲಾಗಿತ್ತಾದರೂ ಅದಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.ಈ ಬಗ್ಗೆ ಮೂಡಬಿದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!