Thursday, June 4, 2026
Homeಕರಾವಳಿಬಂಟ್ವಾಳ: ಕಬ್ಬಿಣ ರಾಡ್ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿ

ಬಂಟ್ವಾಳ: ಕಬ್ಬಿಣ ರಾಡ್ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿ

- Advertisement -
- Advertisement -

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ರಾಡ್ ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಬ್ಬಿಣದ ರಾಡ್ ಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

- Advertisement -

Latest News

error: Content is protected !!