Friday, June 5, 2026
Homeಕರಾವಳಿಮಂಗಳೂರು: ಎರಡು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್‌ಐ ಇಂದು ನಿಧನ

ಮಂಗಳೂರು: ಎರಡು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್‌ಐ ಇಂದು ನಿಧನ

- Advertisement -
- Advertisement -

ಮಂಗಳೂರು: ನಗರದ ಪಾಂಡೇಶ್ವರ ಸಂಚಾರ ಪಶ್ಚಿಮ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾರಾಯಣ ಬಿ ನಾಯಕ್ (58 ) ಅವರು ಅಪಘಾತಕ್ಕೀಡಾಗಿ ಎರಡು ವರ್ಷಗಳ ಬಳಿಕ ಇಂದು ನಿಧನರಾಗಿದ್ದಾರೆ.

ಅಕ್ಟೋಬರ್ 10, 2018 ರಂದು ಹೈವೇ ಪ್ಯಾಟ್ರೋಲಿಂಗ್ ಕರ್ತವ್ಯದಲ್ಲಿದ್ದಾಗ ಮೇರಿಹಿಲ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾರಾಯಣ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಾರ್ಚ್ 14 ರಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಮಕ್ಕಳು ಮತ್ತು ಸಂಬಂಧಿಕರು ಮತ್ತು ಹಲವಾರು ಹಿತೈಷಿಗಳನ್ನು ಅಗಲಿದ್ದಾರೆ. ಮಂಗಳೂರಿನ ಸಿಎಆರ್ ಮೈದಾನದಲ್ಲಿ ಮೃತರ ಪಾರ್ಥೀವ ಶರೀರಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಅಂತಿಮ ನಮನ ಸಲ್ಲಿಸಿದ್ದು, ಬಳಿಕ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

- Advertisement -

Latest News

error: Content is protected !!