Thursday, August 27, 2026
Homeಕರಾವಳಿಉಡುಪಿಹೆಬ್ರಿ: ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ, ಹೊತ್ತಿ ಉರಿದ ಕಾರು!

ಹೆಬ್ರಿ: ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ, ಹೊತ್ತಿ ಉರಿದ ಕಾರು!

- Advertisement -
- Advertisement -

ಹೆಬ್ರಿ: ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮಾರುತಿ ಆಲ್ಟೊ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆ ಬಳಿ ಇಂದು ನಡೆದಿದೆ.

ಹಾವೇರಿ ಮೂಲದ ರಮೇಶ್ ಎಂಬವರು ಹಿರಿಯಡ್ಕದಲ್ಲಿ ಪೂಜೆ ಮುಗಿಸಿ ವಾಪಾಸು ತೆರಳುತ್ತಿರುವ ಸಂದರ್ಭ ಈ ಘಟನೆ ನಡೆದಿದೆ. ಸ್ಥಳೀಯರು ಕೂಡಲೇ ಕಾರ್ಕಳ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ ಪರಿಣಾಮ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ ಎಮ್ ಸಂಜೀವ , ದಫೇದಾರ್ ರೂಪೇಶ್, ಸಿಬ್ಬಂದಿಗಳಾದ ಜಯ ಮೂಲ್ಯ, ಮನೋಹರ್ ಪ್ರಸಾದ್ , ನಿತ್ಯಾನಂದ, ಸುಜಯ ಭಾಗವಹಿಸಿದ್ದರು.

- Advertisement -

Latest News

error: Content is protected !!