Friday, June 5, 2026
Homeಕರಾವಳಿಯೇನೆಪೋಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 20 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್: ಯೇನೆಪೊಯದ 9 ಶಿಕ್ಷಣ ಸಂಸ್ಥೆಗಳು...

ಯೇನೆಪೋಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 20 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್: ಯೇನೆಪೊಯದ 9 ಶಿಕ್ಷಣ ಸಂಸ್ಥೆಗಳು ಬಂದ್

- Advertisement -
- Advertisement -

ಮಂಗಳೂರು:  ದೇರಳಕಟ್ಟೆಯ ಯೇನೆಪೋಯ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಇಲ್ಲಿಯವರೆಗೆ ಒಟ್ಟು 20 ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ. ಇದರಿಂದಾಗಿ ತನ್ನ ವ್ಯಾಪ್ತಿಯ 9 ಕಾಲೇಜುಗಳನ್ನು ಬಂದ್ ಮಾಡಲಾಗಿದೆ.

ಇಂಟರ್ನಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ನರ್ಸಿಂಗ್ ಸಿಬ್ಬಂದಿ ತಮ್ಮ ಕೆಲಸಗಳಿಗೆ ಹಾಜರಾಗಬಹುದು. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಎಂದಿನಂತೆಯೇ ಕಾರ್ಯನಿರ್ವಹಿಸಲಿದೆ. ಬೋಧಕ, ಬೋಧಕೇತರ ಸಿಬ್ಬಂದಿಯೂ ಕೆಲಸಕ್ಕೆ ಹಾಜರಾಗಬಹುದು.

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುವುದು. ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಪರೀಕ್ಷೆಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!