Thursday, September 10, 2026
Homeತಾಜಾ ಸುದ್ದಿಜೊಮ್ಯಾಟೋ ಪ್ರಕರಣ: ಡೆಲಿವರಿ ಬಾಯ್ ಕಾಮರಾಜ್ ಎಫ್‌ಐಆರ್ ದಾಖಲಿಸುತ್ತಿದ್ದಂತೆಯೇ ಮಹಿಳೆ ನಾಪತ್ತೆ!

ಜೊಮ್ಯಾಟೋ ಪ್ರಕರಣ: ಡೆಲಿವರಿ ಬಾಯ್ ಕಾಮರಾಜ್ ಎಫ್‌ಐಆರ್ ದಾಖಲಿಸುತ್ತಿದ್ದಂತೆಯೇ ಮಹಿಳೆ ನಾಪತ್ತೆ!

- Advertisement -
- Advertisement -

ಬೆಂಗಳೂರು: ಜೊಮ್ಯಾಟೋ ಡೆಲಿವರ್ ಬಾಯ್ ನಿಂದ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದ ಮಹಿಳೆಯ ಹೆಸರಿನಲ್ಲಿ ಎಫ್ ಐ ಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ ಎಂದು ವರದಿಯಾಗಿದೆ.

ಜೊಮ್ಯಾಟೋ ಡೆಲಿವರಿ ಬಾಯ್ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಆರೋಪದ ಮೇಲೆ ಹಲ್ಲೆ ಮತ್ತು ನಿಂದನೆಗೆ ಸಂಬಂಧಿಸಿದಂತೆ ಮಹಿಳೆ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ಸಂಪರ್ಕರಿಸಲು ಯತ್ನಿಸಿದ್ದು, ಈ ವೇಳೆ ಮಹಿಳೆ ಬೆಂಗಳೂರಿನಿಂದ ಕಾಲ್ಕಿತ್ತಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮಹಿಳೆ ಹಿತೇಶಾ ಚಂದ್ರಾನಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಸಂಪರ್ಕಿಸಲು ಯತ್ನಿಸಿದ್ದೆವು. ಆದರೆ, ಮಹಿಳೆ ನಗರದಿಂದ ಹೊರಹೋಗಿದ್ದು, ಮಹಾರಾಷ್ಟ್ರದಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಇದ್ದಾರೆಂದು ತಿಳಿದುಬಂದಿದೆ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಗರಕ್ಕೆ ಬಂದ ಕೂಡಲೇ ಹೇಳಿಕೆ ನೀಡುವಂತೆ ಮಹಿಳೆಗೆ ಸೂಚನೆ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರೆಯಲಿದೆ. ಮಹಿಳೆ ಹೇಳಿಕೆ ನೀಡಲು ಬರದೇ ಹೋದರೆ, ಆಕೆಯನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮಾರ್ಚ್ 9 ರಂದು ನಡೆದ ಘಟನೆ ಸಂಬಂಧ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!