Saturday, June 6, 2026
Homeಕರಾವಳಿಉಪ್ಪಿನಂಗಡಿ: ಕಾರು–ಬೈಕ್ ನಡುವೆ ಢಿಕ್ಕಿ, ಒಂದೇ ಬೈಕ್ ನಲ್ಲಿದ್ದ ಮೂವರ ಸ್ಥಿತಿ ಗಂಭೀರ

ಉಪ್ಪಿನಂಗಡಿ: ಕಾರು–ಬೈಕ್ ನಡುವೆ ಢಿಕ್ಕಿ, ಒಂದೇ ಬೈಕ್ ನಲ್ಲಿದ್ದ ಮೂವರ ಸ್ಥಿತಿ ಗಂಭೀರ

- Advertisement -
- Advertisement -

ಉಪ್ಪಿನಂಗಡಿ: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಸುಧಾಕರ್, ಲೋಕಯ್ಯ, ರವಿ ಎಂದು ಗುರುತಿಸಲಾಗಿದೆ. ಒಂದೇ ಬೈಕ್ ನಲ್ಲಿ ಮೂವರು ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸಂಚರಿಸುತ್ತಿದ್ದರು. ಇದೇ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಗಾಯಗೊಂಡ ಮೂವರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳು ಮಡಂತ್ಯಾರು ಮೂಲದವರೆಂದು ತಿಳಿದು ಬಂದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ. ಅಲ್ಲದೇ ಅಪಘಾತದ ತೀವ್ರತೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರ ಕಾಲುಗಳು ಮುರಿದು ರಕ್ತದ ಕೋಡಿ ಹರಿದಿದೆ. .ಪುತ್ತೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!