ಮೇಷ:
ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 3
ವೃಷಭ:
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 9
ಮಿಥುನ:
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.
ಶುಭ ಸಂಖ್ಯೆ: 4
ಕರ್ಕ:
ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು.
ಶುಭ ಸಂಖ್ಯೆ: 6
ಸಿಂಹ:
ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.
ಶುಭ ಸಂಖ್ಯೆ: 1
ಕನ್ಯಾ:
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 5
ತುಲಾ:
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.
ಶುಭ ಸಂಖ್ಯೆ: 7
ವೃಶ್ಚಿಕ:
ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು.
ಶುಭ ಸಂಖ್ಯೆ: 4
ಧನು:
ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ.
ಶುಭ ಸಂಖ್ಯೆ: 1
ಮಕರ:
ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.
ಶುಭ ಸಂಖ್ಯೆ: 2
ಕುಂಭ:
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 8
ಮೀನ:
ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.
ಶುಭ ಸಂಖ್ಯೆ: 3