Wednesday, June 3, 2026
Homeತಾಜಾ ಸುದ್ದಿ7ನೇ ತರಗತಿ ಬಾಲಕ ಹೃದಯಾಘಾತಕ್ಕೆ ಬಲಿ

7ನೇ ತರಗತಿ ಬಾಲಕ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಚಿಕ್ಕಮಗಳೂರು:  7ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ  ಚಿಕ್ಕಮಗಳೂರು  ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.

ಮೃತ ಬಾಲಕನನ್ನು 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ. ಪಟ್ಟಣದ ಮೆಸ್ಕಾಂ ಕಚೇರಿ ಬಳಿ ನಿನ್ನೆ ಬೆಳಗ್ಗೆ 7.30ರ ಸುಮಾರಿಗೆ ಸೈಕಲ್ ಓಡಿಸುತ್ತಿದ್ದ ವೇಳೆ ಬಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದ್ದು, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಮೃತ ಬಾಲಕ ನಗರದ ಡಿಸಿಎಂಸಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದನು. ಸೋಹನ್ ರಾಮ್ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಪ್ರಸನ್ನ ಹಾಗೂ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿ ರೂಪ ದಂಪತಿಯ ಪುತ್ರ. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಇದೀಗ ಓರ್ವ ಪುತ್ರ ಸಾವನ್ನಪ್ಪಿರೋದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು ಘಟನೆಯಿಂದ ತಾಲೂಕಿನ ಜನ ಸಹ ದಿಗ್ಭ್ರಾಂತರಾಗಿದ್ದಾರೆ. ಇಷ್ಟು ಚಿಕ್ಕ ವಯಸ್ಸಿಗೆ ಹೃದಯಾಘಾತ ಅಂದರೆ ಹೇಗೆ ಎಂದು ಜನ ಬಾಲಕನ ಸಾವಿಗೆ ಮರುಗಿದ್ದಾರೆ.

- Advertisement -

Latest News

error: Content is protected !!