Friday, June 5, 2026
Homeಕರಾವಳಿಮಂಗಳೂರು ವಿವಿಯ ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು: ಸ್ನಾತಕೋತ್ತರ ತರಗತಿಗಳು ರದ್ದು

ಮಂಗಳೂರು ವಿವಿಯ ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು: ಸ್ನಾತಕೋತ್ತರ ತರಗತಿಗಳು ರದ್ದು

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ. ಅಲ್ಲದೆ ವಿಶ್ವವಿದ್ಯಾಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ, ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 25 ರಿಂದ ಮಾರ್ಚ್ 29 ರವರೆಗೆ ವಿಶ್ವವಿದ್ಯಾಲಯ ಎಲ್ಲಾ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.

ಅಲ್ಲದೆ ವಿಶ್ವವಿದ್ಯಾನಿಲಯವನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್​ಟಿಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.

- Advertisement -

Latest News

error: Content is protected !!