Friday, June 5, 2026
Homeಕರಾವಳಿಮಡಿಕೇರಿಯಲ್ಲಿ ಒಂಟಿ ಮಹಿಳೆಯ ಕೊಲೆ ಪ್ರಕರಣ: ಮೂಡಬಿದರೆಯ ಯುವಕನ ಬಂಧನ

ಮಡಿಕೇರಿಯಲ್ಲಿ ಒಂಟಿ ಮಹಿಳೆಯ ಕೊಲೆ ಪ್ರಕರಣ: ಮೂಡಬಿದರೆಯ ಯುವಕನ ಬಂಧನ

- Advertisement -
- Advertisement -

ಮೂಡಬಿದಿರೆ : ಮಡಿಕೇರಿಯಲ್ಲಿ ಇತ್ತೀಚೆಗೆ ನಡೆದ ಒಂಟಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಮೂಡಬಿದಿರೆಯ ಯುವಕನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಬಿದಿರೆಯ ಹೊಸಬೆಟ್ಟು ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ.

ಆರೋಪಿಯು ನಗರದ ಖಾಸಗಿ ರೆಸಾರ್ಟಿನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಮಡಿಕೇರಿಯಲ್ಲಿ 70 ವರ್ಷದ ಒಂಟಿ ಮಹಿಳೆ ಲಲಿತಾ ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಲಾಗಿದ್ದು, ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಆರೋಪಿಯು ಮಕ್ಯಾನಿಕ್ ಇಂಜಿನಿಯರ್ ಆಗಿದ್ದು, ಈತ ಮೂಡುಬಿದಿರೆ ಹಾಗೂ ಮಂಗಳೂರಿನಲ್ಲಿ ಮಾರಾಟ ಮಾಡಿದ ಸುಮಾರು 2.80 ಲಕ್ಷ ಮೌಲ್ಯದ ಚಿನ್ನಾಭಾರಣ,ನಗದು, ಹಾಊ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!