Tuesday, April 30, 2024
Homeಕರಾವಳಿಓರ್ವ ಎಸ್ಸೆಸೆಲ್ಸಿ ಹುಡುಗನಿಂದ 21 ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ, ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು

ಓರ್ವ ಎಸ್ಸೆಸೆಲ್ಸಿ ಹುಡುಗನಿಂದ 21 ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ, ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು

spot_img
- Advertisement -
- Advertisement -

ಕಾರವಾರ: ಯಲ್ಲಾಪುರದಲ್ಲಿ ಖಾಸಗಿ ಶಾಲೆಯ 21 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರೋದು ಆತಂಕ ಮೂಡಿಸಿದೆ.

ಕೆಲವು ದಿನಗಳ ಹಿಂದೆ ಇಲ್ಲಿನ 10ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಆತನ ಸಂಪರ್ಕ ಹೊಂದಿದ್ದ 123 ವಿದ್ಯಾರ್ಥಿಗಳ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ನಂತರ ಇಂದು 21 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.

ಇಂದು ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆಯನ್ನು ಮಾಡಲಾಗುತ್ತದೆ. ಆ ಬಳಿಕ ಶಾಲೆಯನ್ನು ಸೀಲ್ ಡೌನ್ ಮಾಡುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಇವರ ಸಂಪರ್ಕದಲ್ಲಿರುವ ಇನ್ನೂ ಎಷ್ಟು ಜನರಿಗೆ ಸೋಂಕು ತಗುಲಿದೆಯೋ ಎಂಬ ಚಿಂತೆ ಕಾಡುತ್ತಿದೆ.

- Advertisement -
spot_img

Latest News

error: Content is protected !!