Sunday, June 7, 2026
Homeತಾಜಾ ಸುದ್ದಿಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೋನಾ ಪಾಸಿಟಿವ್

ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಅಣ್ಣಾ ಮಲೈ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅಣ್ಣಾಮಲೈ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು. ತನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ವೃತ್ತಿಜೀವನಕ್ಕೆ ಪೂರ್ಣ ವಿರಾಮವಿಟ್ಟು ರಾಜಕೀಯಕ್ಕೆ ಪ್ರವೇಶಿಸಿದ್ದರು. ಸದ್ಯ ಬಿಜೆಪಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ತಮ್ಮ ತವರೂರಾದ ಅರವಕುರುಚ್ಚಿ ಕ್ಷೇತ್ರದಿಂದ ಸ್ಪರ್ಧಿಸಿರುವ ಅಣ್ಣಾಮಲೈ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಅಣ್ಣಾಮಲೈ ಕೆಲ ದಿನಗಳ ಹಿಂದೆ ಅಲ್ಲಿನ ಸ್ಥಳೀಯ ಎಐಎಡಿಎಂಕೆ ನಾಯಕರೊಂದಿಗೆ ತಮ್ಮ ಚುನಾವಣಾ ಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಹಾಗೂ ಪ್ರತಿದಿನ ಕನಿಷ್ಟ 25-30 ಸಭೆಗಳಲ್ಲಿ ಭಾಗಿಯಾಗುತ್ತಿದ್ದರು.ಸಾವಿರಾರು ಯುವಜನರನ್ನು ಭೇಟಿ ಮಾಡಿದ್ದರು. ಹೀಗಾಗಿ ಆತಂಕ ಹೆಚ್ಚಾಗುವಂತೆ ಮಾಡಿದೆ.

- Advertisement -

Latest News

error: Content is protected !!