Thursday, June 4, 2026
Homeಕರಾವಳಿಮಾಣಿಯಲ್ಲಿ ಸರಣಿ ಅಪಘಾತ, ಇಬ್ಬರಿಗೆ ಗಾಯ

ಮಾಣಿಯಲ್ಲಿ ಸರಣಿ ಅಪಘಾತ, ಇಬ್ಬರಿಗೆ ಗಾಯ

- Advertisement -
- Advertisement -

ಬಂಟ್ವಾಳ: ಲಾರಿ, ಟಾಟಾ ಏಸ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.


ಟಾಟಾ ಏಸ್ ವಾಹನ ಚಾಲಕ ಹಾಗೂ ಬೈಕ್ ಸವಾರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಮಾಣಿ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಲ್ಲದೇ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ಟಾಟಾ ಏಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!