Sunday, June 7, 2026
Homeತಾಜಾ ಸುದ್ದಿಕುಡಿದ ಮತ್ತಿನಲ್ಲಿ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದ ಪಾಪಿ

ಕುಡಿದ ಮತ್ತಿನಲ್ಲಿ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದ ಪಾಪಿ

- Advertisement -
- Advertisement -

ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.

ತಾಯಿ ಕೆಂಪನಂಜಮ್ಮ(60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಕೊಲೆಯಾದವರು. ಆರೋಪಿ ಮಣಿಕಂಠಸ್ವಾಮಿ ಮದ್ಯ ಸೇವಿಸಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ ಬಳಿಕ ಘಟನಾ ಸ್ಥಳದಿಂದ ತಲೆಮರೆಸಿಕೊಂಡಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್‍ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!