Thursday, June 4, 2026
Homeಕರಾವಳಿಪುತ್ತೂರು: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ನಡೆದಿದೆ.

ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟ ಯುವಕ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ ಕಟ್ಟಡದ ಹೊರ ಜಗಲಿಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮುಂಜಾನೆ ಪತ್ತೆಯಾಗಿದೆ.

ಸಾವಿನ ಕುರಿತು ಸಾರ್ವಜನಿಕರು ಅನುಮಾನ‌ ವ್ಯಕ್ತಪಡಿಸಿದ್ದಾರೆ. ತಲೆಯಲ್ಲಿ ಮುಂಡಾಸು ಕಟ್ಟಿದ ಹಾಗೆಯೇ ಇದ್ದು, ಕಾಲು ನೆಲಕ್ಕೆ ತಾಗುವ ರೀತಿಯಲ್ಲಿ ಮೃತದೇಹವಿದ್ದ ಕಾರಣ ಸಾವಿನ ಕುರಿತು ಸಾರ್ವಜನಿಕರು ಅನುಮಾನ‌ ವ್ಯಕ್ತಪಡಿಸಿದ್ದಾರೆ. ಘಟನ ಸ್ಥಳಕ್ಕೆ ಸಂಪ್ಯ ಪೊಲೀಸರು ಅಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!