Thursday, June 4, 2026
Homeಕ್ರೀಡೆಪಂಜಾಬ್ ಕಿಂಗ್ಸ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ: ಕೆ ಎಲ್ ರಾಹುಲ್ ಆಸ್ಪತ್ರೆಗೆ ದಾಖಲು

ಪಂಜಾಬ್ ಕಿಂಗ್ಸ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ: ಕೆ ಎಲ್ ರಾಹುಲ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ಅಹಮದಾಬಾದ್: ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಆಡುತ್ತಿಲ್ಲ. ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತುರ್ತು ನಿಗಾಘಟಕದಲ್ಲಿರುವ ಅವರನ್ನು ವೈದ್ಯರು ಪರೀಕ್ಷಿಸಿದ ನಂತರ ಅವರಿಗೆ ಅಪೆಂಡಿಕ್ಸ್ ಸಮಸ್ಯೆ ಇರುವುದು ಗೊತ್ತಾಗಿದೆ. ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದು ಬಳಿಕ ಅವರು ಗುಣಮುಖರಾಗಲಿದ್ದಾರೆ ಎಂದು ಪಂಜಾಬ್ ಕಿಂಗ್ಸ್ ಹೇಳಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ಪಂಜಾಬ್ ಕಿಂಗ್ಸ್ ಸೆಣಸಾಡಲಿದೆ. ರಾಹುಲ್ ಅನುಪಸ್ಥಿತಿಯಲ್ಲಿ ಮಯಾಂಕ್ ಅಗರವಾಲ್ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!