Sunday, June 7, 2026
Homeಕರಾವಳಿಸುಬ್ರಮಣ್ಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಯುವಕನನ್ನು ವಶಕ್ಕೆ ಪಡೆದ ಪೊಲೀಸರು

ಸುಬ್ರಮಣ್ಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಯುವಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಸುಬ್ರಹ್ಮಣ್ಯ: ಅಪ್ರಾಪ್ತೆಯನ್ನು ಲಾಡ್ಜ್‌’ಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದಲ್ಲಿ ಯುವಕನೋರ್ವನನ್ನು ಸುಬ್ರಹ್ಮಣ್ಯ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಗುತ್ತಿಗಾರು ಮೆಟ್ಟಿನಡ್ಕದ ಅರುಣ್ ಗೌಡ (22) ಬಂಧಿತ ಆರೋಪಿ. ಏನೆಕಲ್ಲು ಗ್ರಾಮದ 17 ವರ್ಷದ ಯುವತಿಯನ್ನು ಪುಸಲಾಯಿಸಿ ಕಳೆದ ಮಾರ್ಚ್ ತಿಂಗಳಲ್ಲಿ ಕಡಬದ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.  ಪರಿಣಾಮ ಯುವತಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ದೂರು ದಾಖಲಾಗಿತ್ತು.

ಈ ಕುರಿತು ಸುಬ್ರಹ್ಮಣ್ಯ ಪೋಲೀಸರು ಪೋಕ್ಸೋ ಹಾಗೂ ದಲಿತ ದೌರ್ಜನ್ಯದಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಪ್ರಕರಣವನ್ನು ಪುತ್ತೂರು ಎ.ಎಸ್.ಪಿ. ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!