Saturday, May 4, 2024
Homeಕರಾವಳಿಉಪ್ಪಿನಂಗಡಿ: ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಉಪ್ಪಿನಂಗಡಿ: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

34 ನೆಕ್ಕಿಲಾಡಿಯ ದರ್ಬೆ ನಿವಾಸಿ ಸುರೇಶ್ ಪ್ರಭು (40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಯಾಗಿರುವ 44ರ ಹರೆಯದ ಅತ್ಯಾಚಾರ ಸಂತ್ರಸ್ತೆ, 34 ನೆಕ್ಕಿಲಾಡಿಯ ಪಾಥರ್ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ತನ್ನ 70 ವರ್ಷದ ತಾಯಿಯೊಂದಿಗೆ ವಾಸಿಸುತ್ತಿದ್ದರು.

ಸಂತ್ರಸ್ತೆಯ ಪತಿ ಗುಜರಾತ್‌ನಲ್ಲಿದ್ದು, ಗಂಡನನ್ನು ಭೇಟಿಯಾಗದೆ ಸುಮಾರು 10 ತಿಂಗಳಾಗಿತ್ತು ಎಂದು ತಿಳಿದುಬಂದಿದೆ. ಮೇ 12ರಂದು ಇವರಿದ್ದ ಬಾಡಿಗೆ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ ಬಂದಿದ್ದು, ಅವರಿಗೆ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ನಡೆಸಲು ತಿಳಿಸಿದ್ದರು. ಅದರಂತೆ ಈಕೆಯ ಸ್ಕ್ಯಾನಿಂಗ್ ನಡೆಸಿದಾಗ ಈಕೆ ಏಳು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದ್ದು, ಬಳಿಕ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -
spot_img

Latest News

error: Content is protected !!