Friday, June 5, 2026
Homeಕರಾವಳಿಬಂಟ್ವಾಳ ನಗರ ಠಾಣಾ ಎಎಸ್‌ಐ ಜಯರಾಮ ರೈ ನಿಧನ

ಬಂಟ್ವಾಳ ನಗರ ಠಾಣಾ ಎಎಸ್‌ಐ ಜಯರಾಮ ರೈ ನಿಧನ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ ರೈ(58 ವ) ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಅವರು ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಒಂದು ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ನಗರ ಠಾಣೆಯಲ್ಲಿ ಹಲವು ವರ್ಷಗಳಿಂದ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!