Saturday, June 6, 2026
Homeತಾಜಾ ಸುದ್ದಿಕೊರೋನಾ ಹಾವಳಿ: 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿ ಸರ್ಕಾರದಿಂದ ಆದೇಶ

ಕೊರೋನಾ ಹಾವಳಿ: 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿ ಸರ್ಕಾರದಿಂದ ಆದೇಶ

- Advertisement -
- Advertisement -

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ.

ಪರೀಕ್ಷೆಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಮುಖ ಸಭೆ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಳೆದ ವರ್ಷದಂತೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಇಚ್ಛಿಸಿದರೆ, ಸಿಬಿಎಸ್‌ಇ ಅವರಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸುತ್ತದೆ. ಆದರೆ, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪರೀಕ್ಷೆ ನಡೆಸುವುದು ಸಾಧ್ಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಶಾಲೆಗಳು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಪರೀಕ್ಷೆಯ ನಡೆಸುವುದರ ಬಗ್ಗೆ ಸಲಹೆಗಳನ್ನು ಕೇಳಲಾಗಿತ್ತು. ಹಲವು ರಾಜ್ಯಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಪರೀಕ್ಷೆ ರದ್ದು ಪಡಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.

- Advertisement -

Latest News

error: Content is protected !!