Friday, June 5, 2026
Homeತಾಜಾ ಸುದ್ದಿಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ವಿಧಿವಶ

- Advertisement -
- Advertisement -

ಬೆಂಗಳೂರು: 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ.

ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. 1944ರಲ್ಲಿ ಜನಿಸಿದ್ದ ಜಯಾ 1958ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಅಣ್ಣಾವ್ರ ಅತೀ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು. 6 ದಶಕಗಳ ಕಾಲ ಸಿನಿರಂಗದಲ್ಲಿ ನಿರಂತರವಾಗಿದೆ ಸೇವೆ ಸಲ್ಲಿಸಿದ ಹಿರಿಮೆ ಅವರಿಗಿದೆ.

ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಬಿ. ಜಯಾ ಸಿನಿಮಾ ಜೊತೆಗೆ ಹಲವಾರು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ಅನೇಕ ದಿಗ್ಗಜರ ಚಿತ್ರಗಳಲ್ಲಿ ಅಭಿನಯಿಸಿದ ಜಯಾ ಅವರು ನಿಧನದ ಹಿನ್ನಲೆಯಲ್ಲಿ ಸ್ಯಾಂಡಲ್ವುಡ್ ಕಂಬನಿ ಮಿಡಿದಿದೆ.

- Advertisement -

Latest News

error: Content is protected !!