Sunday, September 13, 2026
Homeಕರಾವಳಿಬೆಳ್ತಂಗಡಿ: 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಸೆರೆ

ಬೆಳ್ತಂಗಡಿ: 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಸೆರೆ

- Advertisement -
- Advertisement -

ಬೆಳ್ತಂಗಡಿ: 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.

ತಾಲೂಕಿನ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿ. ವಿಘ್ನೇಶ್ ಭಂಡಾರಿ ತನ್ನ ಪಕ್ಕದ ಮನೆಯ ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು ಬೆತ್ತಲೆ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಬಂಧಿತ ಆರೋಪಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!