Thursday, June 4, 2026
Homeತಾಜಾ ಸುದ್ದಿಮುಂಬೈ: ಅಪಾರ್ಟ್ ಮೆಂಟ್ ಕುಸಿದು ಬಿದ್ದು 11 ಮಂದಿ ಸಾವು, ಹಲವರಿಗೆ ಗಾಯ

ಮುಂಬೈ: ಅಪಾರ್ಟ್ ಮೆಂಟ್ ಕುಸಿದು ಬಿದ್ದು 11 ಮಂದಿ ಸಾವು, ಹಲವರಿಗೆ ಗಾಯ

- Advertisement -
- Advertisement -

ಮುಂಬೈ: ನಾಲ್ಕು ಮಹಡಿಯ ಕಟ್ಟಡವೊಂದು ಧರೆಗುರುಳಿದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಮುಂಬೈನ ಪಶ್ಚಿಮ ಮಲಾಡ್ ನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.

ಕಟ್ಟಡ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಪಕ್ಕದ 3 ಮನೆಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಹಲವರು ಸಿಲುಕಿ ಹಾಕಿಕೊಂಡಿದ್ದು ಅವರ ಶೋಧ ಕಾರ್ಯ ನಡೆಯುತ್ತಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

ಸ್ಥಳಕ್ಕೆ ಪೊಲೀಸರು, ರಕ್ಷಣಾ ಕಾರ್ಯ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ. ಕೆಲ ದಿನಗಳಲ್ಲಿ ಇಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಟ್ಟಡ ಕುಸಿದಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಈ ಕಟ್ಟಡ ಕೂಡ ಅಂಥದ್ದೇ ಒಂದು ಜಾಗದಲ್ಲಿ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!