Saturday, June 13, 2026
Homeಕರಾವಳಿಸುಳ್ಯದ ಅಡ್ಕಾರಿನಲ್ಲಿ ಪಿಕಪ್ ವಾಹನಕ್ಕೆ ಕಂಟೇನರ್ ಲಾರಿ ಡಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಸುಳ್ಯದ ಅಡ್ಕಾರಿನಲ್ಲಿ ಪಿಕಪ್ ವಾಹನಕ್ಕೆ ಕಂಟೇನರ್ ಲಾರಿ ಡಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

- Advertisement -
- Advertisement -

ಸುಳ್ಯ: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಸಂಪಾಜೆ ಕಡೆಗೆ ತೆರಳುತ್ತಿದ್ದ ಪಿಕಪ್​ಗೆ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪಿಕಪ್​ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೆರಾಜೆಯ ಪಾಲೆಗುಂಡಿಯ ದಿನಕರ (32) ಎಂಬವರು ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಂಟೇನರ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!