Sunday, June 7, 2026
Homeಕರಾವಳಿಉಡುಪಿಗಮನಿಸಿ.! ಇಂದಿನಿಂದ ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಗಮನಿಸಿ.! ಇಂದಿನಿಂದ ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

- Advertisement -
- Advertisement -

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇದೇ 12 ರಿಂದ 16ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಜೂನ್ 16 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಜೂನ್ 14 ಮತ್ತು 15 ರಂದು ಹಾವೇರಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.

- Advertisement -

Latest News

error: Content is protected !!