Monday, August 24, 2026
Homeಕರಾವಳಿಬಂಟ್ವಾಳ: ಮೆಡಿಕಲ್ ಕಾಲೇಜು ಬಸ್-ಬೈಕ್ ನಡುವೆ ಅಪಘಾತ, ನಾಲ್ವರಿಗೆ ಗಾಯ

ಬಂಟ್ವಾಳ: ಮೆಡಿಕಲ್ ಕಾಲೇಜು ಬಸ್-ಬೈಕ್ ನಡುವೆ ಅಪಘಾತ, ನಾಲ್ವರಿಗೆ ಗಾಯ

- Advertisement -
- Advertisement -

ಬಂಟ್ವಾಳ: ಮೆಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿದ ಬಸ್ಸಿನಲ್ಲಿ ವೆನ್ಲಾಕ್, ಕೆಎಂಸಿ, ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಸೇರಿದ ಆಸ್ಪತ್ರೆಯ ಸಿಬ್ಬಂದಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಸುರುಳಿಮೂಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದ ತೀವ್ರತೆಗೆ ಬಸ್ ರಸ್ತೆ ಬದಿಯ ಮರದ ಬುಡದಲ್ಲಿ ಸಿಕ್ಕಿಹಾಕಿಕೊಂಡಿದ್ದರಿಂದ ಪ್ರಪಾತಕ್ಕೆ ಉರುಳಿ ಬೀಳುವುದು ಸ್ವಲ್ಪದರಲ್ಲೇ ಪಾರಾಗಿದ್ದು, ಭಾರೀ ಅನಾಹುತ ತಪ್ಪಿದೆ. ಈ ವೇಳೆ ಓರ್ವ ಮಹಿಳೆ ಪ್ರಪಾತಕ್ಕೆ ಉರುಳಿ ಬಿದ್ದಿರುವುದಾಗಿ ತಿಳಿದುಬಂದಿದೆ. ಬೈಕ್ ಸವಾರ ಇರಂದೂರು ಪಡೀಲ್ ನಿವಾಸಿ ಝಾಕೀರ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಫ್ ನರ್ಸ್ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ. ಎಲ್ಲರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್ಸಿನಲ್ಲಿ ಸುಮಾರು 13 ಜನರಿದ್ದು, ಮಂಗಳೂರು ಕಡೆಗೆ ಮಂಗಳಪದವು, ಅನಂತಾಡಿ, ಮಾಣಿ ಕಡೆಯ ಸ್ಟಾಪ್ ನರ್ಸ್ ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!