Sunday, June 7, 2026
HomeUncategorizedಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾರ್ಕಳದ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾರ್ಕಳದ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಕಾರ್ಕಳ: ತಮಿಳುನಾಡು ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಇಬ್ಬರ ವಿರುದ್ದ ಫೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಆರೋಪಿಗಳಾದ ಸತೀಶ್ (24) ಮತ್ತು ವಿಜಯ (35) ಎನ್ನುವವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ದೂರು ನೀಡಿದ್ದಾರೆ.

16 ವರ್ಷದ ಈಕೆಗೆ ತಂದೆ ಇಲ್ಲದೆ ಇರುವುದರಿಂದ ತಾಯಿ ಮತ್ತು ಮಲತಂದೆಯೊಂದಿಗೆ ವಾಸವಿದ್ದಳು. ಮಲತಂದೆಯ ಕಿರುಕುಳ ತಾಳಲಾರದೆ ಸ್ನೇಹಿತನಿಗೆ ಕರೆಮಾಡಿ ಆತನ ಕಾರ್ಕಳದ ಮನೆಯಲ್ಲಿ 2 ತಿಂಗಳುಗಳಿಂದ ವಾಸವಿದ್ದಳು. ಆತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಸಾರ್ವಜನಿಕರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಲಾಗಿತ್ತು.

ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಮಾರ್ಗದರ್ಶನದಲ್ಲಿ ಠಾಣಾ ಸಬ್ ಇನ್ಸ್ ಪೆಕ್ಟರ್ ಮದು .ಬಿ. ಮತ್ತು ಸಹಾಯಕ ಸಬ್ ಇನ್ಸ್ ಪೆಕ್ಟರ್ ರಾಜೇಶ್ ಪಿ ಪೋಕ್ಸೋ ಕಾಯ್ದೆ ಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕಪಿಲ ಮತ್ತು ಔಟ್ ರೀಚ್ ವರ್ಕರ್ ಸುನಂದಾ ಸಮಾಲೋಚನೆಗೊಳಪಡಿಸಿದ್ದಾರೆ.

ನೊಂದ ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಬಾಲಕಿಯರ ಬಾಲಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

- Advertisement -

Latest News

error: Content is protected !!