Monday, June 8, 2026
HomeUncategorizedಕೊಟ್ಟಿಗೆಹಾರ : ಮಂಗಳೂರು - ಚಿಕ್ಕಮಗಳೂರು ಸರ್ಕಾರಿ ಬಸ್ ಪಲ್ಟಿ!

ಕೊಟ್ಟಿಗೆಹಾರ : ಮಂಗಳೂರು – ಚಿಕ್ಕಮಗಳೂರು ಸರ್ಕಾರಿ ಬಸ್ ಪಲ್ಟಿ!

- Advertisement -
- Advertisement -

ಚಿಕ್ಕಮಗಳೂರು: ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಪ್ರಯಾಣ ಬೆಳೆಸಿದ್ದ ಸರ್ಕಾರಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಘಟನೆ ಕೊಟ್ಟಿಗೆಹಾರದಲ್ಲಿ ನಡೆದಿದೆ.

ಸದ್ಯ ಬಸ್ಸಿನಲ್ಲಿದ್ದ 25 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಮುಂಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋದ ಚಾಲಕನ ನಿಯಂತ್ರಣ ತಪ್ಪಿ ಬಸ್ ಗುಂಡಿಗೆ ಬಿದ್ದಿದೆ ಎನ್ನಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!